ನಟ ರಜನಿಕಾಂತ್ ಪುತ್ರಿ ಐಶ್ವರ್ಯಾ ನಿವಾಸದಲ್ಲಿ ಕಳ್ಳತನವಾಗಿದೆ. ತಮ್ಮ ನಿವಾಸದಲ್ಲಿದ್ದ ವಜ್ರ ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿ ಚೆನ್ನೈನ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ದೂರು ದಾಖಲಿಸಿದ್ದಾರೆ.
ಐಶ್ವರ್ಯಾ ಅವರು ಸಲ್ಲಿಸಿದ ದೂರಿನಲ್ಲಿ, ತನ್ನ ಮನೆಯ ಲಾಕರ್‌ನಲ್ಲಿದ್ದ 3.60 ಲಕ್ಷ ಬೆಲೆ ಬಾಳುವ 60 ಸವರನ್ ಚಿನ್ನ ಮತ್ತು ವಜ್ರದ ಆಭರಣಗಳು ನಾಪತ್ತೆಯಾಗಿವೆ ಎಂದು ತೆನಾಂಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ, ಐಶ್ವರ್ಯಾ ಅವರು ತಮ್ಮ ಸೇವಕಿಯರಾದ ಈಶ್ವರಿ, ಲಕ್ಷ್ಮಿ ಮತ್ತು ಅವರ ಚಾಲಕ ವೆಂಕಟ್, ಸೇಂಟ್ ಮೇರಿಸ್ ರಸ್ತೆಯಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ಗೆ ಆಗಾಗ್ಗೆ ಭೇಟಿ ನೀಡುತ್ತಿದ್ದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ತೇನಾಪೇಟೆ ಪೊಲೀಸರು ಐಪಿಸಿ ಸೆಕ್ಷನ್ 381 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.