ಕೊಪ್ಪಳ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯದ ಬಿಸಿ ಏರುತ್ತಿದ್ದು, ಬಿಜೆಪಿ ತ್ಯೆಜಿಸುತ್ತಿರುವವರ ಸಂಖ್ಯೆ ದಿನೆ ದಿನೆ ಹೆಚ್ಚಾಗುತ್ತಲೇ ಇದೆ. ಇದೀಗ ಮತ್ತೋರ್ವ ಸಂಸದ ರಾಜೀನಾಮೆ ಮುಂದಾಗಿದ್ದಾರೆ.
ಕರಡಿ ಸಂಗಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕೊಪ್ಪಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದರು. ಇದೀಗ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೆ ತಯಾರಿ ನಡೆಸಿದ್ದಾರೆ. ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದ ಪಕ್ಷದ ವರಿಷ್ಠರ ಬಳಿ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.
ಆದರೆ ಪುತ್ರನಿಗೂ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಇಂದು ಬೆಳಿಗ್ಗೆ 11ಕ್ಕೆ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆ ಬಳಿಕ ಮುಂದಿನ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಲಿದ್ದಾರೆ. ಸಭೆಯ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಸಂಗಣ್ಣ, ಸೋಮವಾರ ಲೋಕಸಭಾ ಸ್ಪೀಕರ್ ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಏ.19 ರಂದು ಜೆಡಿಎಸ್‍ನಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.
