ಬೆಂಗಳೂರು: ‘ನಾನು ಕಾಂಗ್ರೆಸ್ ಸೇರ್ಪಡೆ ಆಗುವುದು ಈ ಜನ್ಮದಲ್ಲಿಯೇ ಅಸಾಧ್ಯ. ಅದು ನಿಮಗೂ ಗೊತ್ತಿದೆ‘ ಎಂದು ಬಿಎಸ್‌ವೈ ಮಾಧ್ಯಮದವರೊಂದಿಗೆ ಹೇಳಿದ್ದಾರೆ.
ಬಿಜೆಪಿ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರಿದ್ದು, ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ಗೌರವ ಇದೆ. ಕೆಲವೊಮ್ಮೆ ಅವರು ತಮಾಷೆಗೂ ಹೇಳುತ್ತಾರೆ. ಅವರಿಗೀಗ 92 ವರ್ಷ ಎಂದು ಹೇಳಿದ್ದಾರೆ.
‘ರಾಜ್ಯದಲ್ಲಿ ಬಿಜೆಪಿಗೆ ವಾತಾವರಣ ಚೆನ್ನಾಗಿದೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಹೋಗಿರುವುದು ಚುನಾವಣೆ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಯಾರ ನೆರವೂ ಇಲ್ಲದೇ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ’ ಎಂದು ಯಡಿಯೂರಪ್ಪ ಹೇಳಿದ್ದಾರೆ.