ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ ರೂ. ಹಣವನ್ನು ಎಸ್.ಜೆ ಪಾರ್ಕ್ ಪೊಲೀಸರು ಜಪ್ತಿ ಮಾಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದಾಗ ಅನುಮಾನಗೊಂಡು ಕೆಟ್ಟು ನಿಂತಿದ್ದ ಆಟೋ ಒಂದನ್ನು ತಪಾಸಣೆ ಮಾಡಿದಾಗ ಬರೋಬ್ಬರಿ 1 ಕೋಟಿ ರೂ. ಹಣ ಪತ್ತೆಯಾಗಿದೆ.

ಆಟೋದಲ್ಲಿದ್ದ ಸುರೇಶ್ ಹಾಗೂ ಪ್ರವೀಣ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಹಣ ರಾಜೇಶ್ ಎಂಟರ್‌ಪ್ರೈಸಸ್ ಗೆ ಸೇರಿದೆ ಎಂದು ಹೇಳಿದ್ದಾರೆ. ಹಣದ ಮೂಲದ ಬಗ್ಗೆ ಅನುಮಾನಗೊಂಡ ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳನ್ನು ಕರೆಸಿ ಪ್ರಕರಣವನ್ನು ಹಸ್ತಾಂತರ ಮಾಡಲಾಗಿದೆ ಎಂದು ಚಿಕ್ಕ ಪೇಟೆ ನೋಡಲ್ ಅಧಿಕಾರಿ ಮನೋಜ್ ಮಿಶ್ರಾ ಹೇಳಿಕೆ ನೀಡಿದ್ದಾರೆ