ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಬಸವನಗುಡಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ.
ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಪಟಾಲಮ್ಮ ಚೆಕ್ ಪಾಯಿಂಟ್ ಬಳಿ ಪರಿಶೀಲನೆ ನಡಿಸಿದಾಗ ಕ್ರೇಟಾ ಕಾರಿನಲ್ಲಿ ದಾಖಲೆ ಇಲ್ಲದ 18 ಲಕ್ಷ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕಾರು ಚಾಲಕ ರಿಷಭ್ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆ ಮಾರ್ಚ್ 29 ರಂದು ನೀತಿ ಸಂಹಿತೆ ಜಾರಿಯಾಗಿತ್ತು. ಇಲ್ಲಿಯವರೆಗೆ 100 ಕೋಟಿಗೂ ಹೆಚ್ಚು ನಗದು, ಚಿನ್ನ, ಬೆಳ್ಳಿ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
