Monday, October 13, 2025
Homeಟಾಪ್ ನ್ಯೂಸ್ಚಲಿಸುತ್ತಿದ್ದ ಬಸ್ ನಿಂದ ಜಿಗಿದ ವಿದ್ಯಾರ್ಥಿನಿ ಸಾವು

ಚಲಿಸುತ್ತಿದ್ದ ಬಸ್ ನಿಂದ ಜಿಗಿದ ವಿದ್ಯಾರ್ಥಿನಿ ಸಾವು

ಬಳ್ಳಾರಿ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಳ್ಳಾರಿಯ ಹೂವಿನ ಹಡಗಲಿಯಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ ಶ್ವೇತಾ ಮೃತಪಟ್ಟವಳು. ಶ್ವೇತಾ ಬಿಸಿಎಂ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆಗೆ ಅಪಘಾತ ಸಂಭವಿಸಿದೆ.

ಹಡಗಲಿಯಿಂದ ರಾಣೆಬೆನ್ನೂರಿಗೆ ತೆರಳುತ್ತಿದ್ದ ಬಸ್‌ ಹತ್ತಿದ್ದ ಶ್ವೇತಾ, ಕಾಲೇಜು ಬಳಿ ಬಸ್ ನಿಲ್ಲಿಸುವಂತೆ ಕೋರಿದ್ದಾಳೆ. ಹಡಗಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು‌ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣ ಚಲಿಸುತ್ತಿದ್ದ ಬಸ್‌ನಿಂದ ಜಿಗಿದಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶ್ವೇತಾ ಮೃತಪಟ್ಟಿದ್ದಾಳೆ. ಆಕ್ರೋಷಗೊಂಡ ಕಾಲೇಜು ವಿದ್ಯಾರ್ಥಿಗಳು ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಸುದ್ದಿ