Monday, July 7, 2025
Homeಚುನಾವಣೆ 2023ಚಾಮರಾಜ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆ ?

ಚಾಮರಾಜ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆ ?

ಹಾಸನ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆಸುತ್ತಿರುವ ಭವಾನಿ ರೇವಣ್ಣ ಮೈಸೂರಿನ ಚಾಮರಾಜ ಕ್ಷೇತ್ರದಿಂದ ಸ್ಪರ್ಧೆಗಿಳಿಯಲಿದ್ದಾರೆಯೇ? ಎಂಬ ಮಾತುಗಳು ಓಡಾಡುತ್ತಿವೆ.

ವಿಧಾನಸಭಾ ಚುನಾವಣೆ ಹಿನ್ನೆಲೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ಗಾಗಿ ಭವಾನಿ ರೇವಣ್ಣ ತೀವ್ರ ಪೈಪೋಟಿ ನಡೆಸಿದ್ದರು. ಆದರೆ ಇದೀಗ ಮೈಸೂರಿನ ಚಾಮರಾಜ ಕ್ಷೇತ್ರದಿಂದ ಸ್ಪರ್ಧೆಗಿಳಿಯಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭವಾನಿ ರೇವಣ್ಣ ಮತ್ತು ಎಚ್‌.ಪಿ. ಸ್ವರೂಪ್‌ ನಡುವಿನ ವಿವಾದಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಸೂತ್ರ ರೂಪಿಸಿದ್ದು, ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಸ್ಪರ್ಧಿಸಲು ಭವಾನಿ ಅವರಿಗೆ ಸೂಚಿಸುವ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿದ್ದಾರೆಂದು ಹೇಳಲಾಗುತ್ತಿದೆ.

ಆದರೆ ಈ ಸುದ್ದಿಯನ್ನು ಭವಾನಿ ಅವರ ಕುಟುಂಬದ ಮೂಲಗಳು ಅಲ್ಲಗಳೆದಿದೆ. ಹಾಸನ ಕ್ಷೇತ್ರ ಹೊರತುಪಡಿಸಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲು ಮಾನಸಿಕವಾಗಿ ಸಿದ್ಧರಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಆಧಾರ ರಹಿತ ಎಂದು ಸ್ಪಷ್ಟಪಡಿಸಿದ್ದಾರೆ.

ಹೆಚ್ಚಿನ ಸುದ್ದಿ