Monday, October 13, 2025
Homeಚುನಾವಣೆ 2023ಕಾಂಗ್ರೆಸ್‌ ತೊರೆದ ಒಂದೇ ದಿನದಲ್ಲಿ ಬಿಜೆಪಿಯಿಂದ ಟಿಕೆಟ್‌

ಕಾಂಗ್ರೆಸ್‌ ತೊರೆದ ಒಂದೇ ದಿನದಲ್ಲಿ ಬಿಜೆಪಿಯಿಂದ ಟಿಕೆಟ್‌

ಬೆಂಗಳೂರು: ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಾಕಿ ಉಳಿದ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆ ಮೂಲಕ ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ನಿನ್ನೆಯಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ರಾಯಚೂರು ಮಾಜಿ ಸಂಸದ ಬಿವಿ ನಾಯಕರಿಗೆ ಬಿಜೆಪಿ ಮಣೆ ಹಾಕಿದ್ದು, ಎಸ್‌ಟಿ ಮೀಸಲು ಕ್ಷೇತ್ರವಾದ ಮಾನ್ವಿಗೆ  ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಎಂಬವರಿಗೆ ಟಿಕೆಟ್‌ ನೀಡಿದೆ. ಮಹಾನಗರ ಪಾಲಿಕೆ ಸದಸ್ಯ ಚೆನ್ನಬಸಪ್ಪ ಈಶ್ವರಪ್ಪ ಅವರ ಆಪ್ತರಾಗಿದ್ದಾರೆ.

 

ಹೆಚ್ಚಿನ ಸುದ್ದಿ