ಬಿಜೆಪಿ ಟಿಕೆಟ್ ಗೊಂದಲಕ್ಕೆ ತೆರೆ ಬೀಳುವ ಲಕ್ಷಣ ಕಾಣಿಸಲಾರಂಭಿಸಿದೆ. ವರಿಷ್ಠರೊಂದಿಗಿನ ಹಲವು ಸುತ್ತಿನ ಸಭೆ, ಮಾತುಕತೆಗಳ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ದೊಡ್ಡ ಸಂಖ್ಯೆಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕೆಲವು ಕ್ಷೇತ್ರಗಳಲ್ಲಿ ಬದಲಾವಣೆಗಳಾಗಿವೆ ಎಂದು ತಿಳಿಸಿದ್ದಾರೆ. ಕೆಲ ಕ್ಷೇತ್ರಗಳಲ್ಲಿ ಕೆಲ ನಾಯಕರು ಚುನಾವಣೆ ನಿವೃತ್ತಿ ಘೋಷಿಸಿದ್ದಾರೆ. ಆ ಕ್ಷೇತ್ರದಲ್ಲಿ ಬದಲಾವಣೆಯಾಗಲಿದೆ. ಬಿಜೆಪಿ ಎಲ್ಲದರಲ್ಲಿಯೂ ಹೊಸತನವನ್ನು ತರುತ್ತದೆ. ಇದೇ ಬಿಜೆಪಿಗೂ ಹಾಗೂ ಬೇರೆ ಪಕ್ಷಗಳಿಗೂ ಇರುವ ವ್ಯತ್ಯಾಸ ಎಂದು ಅವರು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿ ದೆಹಲಿಗೆ ಹಿಂದಿರುಗಿದ ನಂತರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.