ಬೆಂಗಳೂರು: ನಾಮಪತ್ರ ಸಲ್ಲಿಕೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಸೋಮವಾರ ಹಲವು ಬಿಜೆಪಿ ಅಭ್ಯರ್ಥಿಗಳು ನಾಮಪತ್ರಸಲ್ಲಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಚಿಕ್ಕಬಳ್ಳಾಪುರದಿಂದ ನಾಮಪತ್ರ ಸಲ್ಲಿಸಿದರೆ, ಸಚಿವ ಎಂಟಿಬಿ ನಾಗರಾಜ್ ಹೊಸಕೋಟೆಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಚಿವ ಮುನಿರತ್ನ ರಾಜರಾಜೇಶ್ವರಿನಗರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.


