ನವದೆಹಲಿ: ಮೇ 10 ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಸಜ್ಜಾಗಿವೆ.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸ್ಟಾರ್ ಪ್ರಚಾರಕರಿಂದ ಬೃಹತ್ ರೋಡ್ ಶೋ ಮತ್ತು ಸಮಾವೇಶಗಳನ್ನು ನಡೆಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಅನೇಕರು ಸ್ಟಾರ್ ಪ್ರಚಾರಕರಾಗಿ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.
ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಟಿ.ರವಿ, ಅಣ್ಣಾಮಲೈ, ಕಿಚ್ಚಾ ಸುದೀಪ್, ಸಂಸದ ಜಗ್ಗೇಶ್, ಶೃತಿ, ತಾರಾ ಸೇರಿದಂತೆ ಹಲವರನ್ನು ಸ್ಟಾರ್ ಪ್ರಚಾರಕ್ಕೆ ನೇಮಿಸಲಾಗಿದೆ.