Wednesday, August 5, 2026
Homeಚುನಾವಣೆ 2023ಸಿಎಂ‌ ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು

ಸಿಎಂ‌ ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು

ಹಾವೇರಿ: ಹಾವೇರಿ ಶಾಸಕ ನೆಹರು ಓಲೇಕಾರ ಅವರಿಗೆ ಟಿಕೆಟ್ ತಪ್ಪಿಸಲು ಸಿಎಂ ಬಸವರಾಜ ಬೊಮ್ಮಾಯಿ‌ ಶ್ರಮಿಸಿದ್ದಾರೆ ಎಂದು ಆಕ್ರೋಷಗೊಂಡ ನೆಹರು ಓಲೇಕಾರ ಅಭಿಮಾನಿಗಳು ಬಸವರಾಜ ಬೊಮ್ಮಾಯಿ‌ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸಿದ್ದಪ್ಪ ವೃತ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಬಿಜೆಪಿ ಸರ್ವನಾಶ ಮಾಡಲು ಬೊಮ್ಮಾಯಿ‌ ಮುಂದಾಗಿದ್ದಾರೆ ಎಂದು ಅಸಮಾಧಾನ ವ್ಯಕ್ಯಪಡಿಸಿದರು‌.

ಬಿಜೆಪಿ ನಾಯಕರು ಪಕ್ಷವನ್ನು ಎಂದು ಕಟ್ಟಿ ಬೆಳೆಸದ ವ್ಯಕ್ತಿಯನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಇದರಿಂದ ನಿಷ್ಠಾವಂತ ಕಾರ್ಯಕರ್ತರಿಂದ ನೋವು ಆಗಿದೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿರುವ ಓಲೇಕಾರ ಅವರನ್ನು ಕಡೆಗಣಿಸಿದ್ದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದರು‌.

ಹೆಚ್ಚಿನ ಸುದ್ದಿ