Monday, July 7, 2025
Homeಚುನಾವಣೆ 2023ಪಕ್ಷಕ್ಕೆ ಮಾಡಿರುವ ದ್ರೋಹ ಅಕ್ಷಮ್ಯ! - ಶೆಟ್ಟರ್ ವಿರುದ್ಧ ಬಿಎಸ್‌ವೈ ವಾಗ್ದಾಳಿ

ಪಕ್ಷಕ್ಕೆ ಮಾಡಿರುವ ದ್ರೋಹ ಅಕ್ಷಮ್ಯ! – ಶೆಟ್ಟರ್ ವಿರುದ್ಧ ಬಿಎಸ್‌ವೈ ವಾಗ್ದಾಳಿ

ಬೆಂಗಳೂರು : ಬಿಜೆಪಿ ನಿಮಗೆ ಎಲ್ಲವನ್ನೂ ಕೊಟ್ಟಿದೆ. ಆದರೆ ಪಕ್ಷದ ಋಣವನ್ನು ಮರೆತು ಇಂದು ನೀವು ಕಾಂಗ್ರೆಸ್ ಜೊತೆಗೆ ಕೈಜೋಡಿಸುವ ಮೂಲಕ ಪಕ್ಷಕ್ಕೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಮಾಜಿ ಸಿಎಂ. ಬಿ.ಎಸ್. ಯಡಿಯೂರಪ್ಪ ಅವರು ಜಗದೀಶ್ ಶೆಟ್ಟರ್ ವಿರುದ್ಧ ಹರಿಹಾಯ್ದಿದ್ದಾರೆ.

ಭಾನುವಾರ ಮಧ್ಯಾಹ್ನ ದೈವಜ್ಞ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ, ಪ್ರತಿಪಕ್ಷದ ನಾಯಕರನ್ನಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಮಾಡಿದೆ. ಆದರೆ ಜಗದೀಶ್ ಶೆಟ್ಟರ್ ದೇಶದ ಒಳಿತಿಗಾಗಿ ಪ್ರಧಾನಿ ನರೇಂದ್ರ ಮೋದಿಯವರೊಡನೆ ಕೈಜೋಡಿಸುವುದ ಬಿಟ್ಟು ಕೆಟ್ಟ ನಿರ್ಧಾರ ಕೈಗೊಂಡಿರುವುದು ಅವರ ಸ್ಥಾನಮಾನಕ್ಕೆ ತಕ್ಕದಲ್ಲ ಎಂದಿದ್ದಾರೆ.

ಬಿಜೆಪಿಯಲ್ಲಿ ಹೊಸ ಚಿಂತನೆ, ಹೊಸ ಹುರುಪು, ಹೊಸ ಮುಖ, ಹೊಸರಕ್ತ ಹರಿಯುತ್ತಿದೆ. ನಾವು ಮುಂದಿನ ಪೀಳಿಗೆಯ ರಾಜಕಾರಣಕ್ಕೆ ಅವಕಾಶ ಮಾಡಿಕೊಡಬೇಕಿದೆ ಎಂದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಇಂದು ರಾಜ್ಯಾದ್ಯಂತ ಗುರುತಿಸಿಕೊಂಡಿರುವುದು ಬಿಜೆಪಿ ಮೂಲಕ. ವ್ಯಕ್ತಿ ಎಷ್ಟೇ ದೊಡ್ಡವನಾದರೂ ಸಹ ಪಕ್ಷದ ಬೆಂಬಲವನ್ನು ಮರೆಯಬಾರದು ಎಂದು ಕಠಿಣವಾಗಿ ನುಡಿದರು.

ಧರ್ಮೇಂದ್ರ ಪ್ರಧಾನ್, ಪ್ರಲ್ಹಾದ್ ಜೋಷಿ ಇಬ್ಬರೂ ಶನಿವಾರ ಜಗದೀಶ್ ಶೆಟ್ಟರ್ ನಿವಾಸಕ್ಕೆ ತೆರಳಿ ಕೇಂದ್ರದಲ್ಲಿ ನಿಮ್ಮನ್ನು ರಾಜ್ಯ ಸಭಾ ಸದಸ್ಯರನ್ನಾಗಿ ಮಾಡಿ ಮಂತ್ರಿಯನ್ನಾಗಿ ಮಾಡಲೂ ಸಹ ಸಿದ್ದರಿದ್ದೇವೆ ಎಂದರೂ ಜಗದೀಶ್ ಶೆಟ್ಟರ್ ಜಗ್ಗದೆ ಕಾಂಗ್ರೆಸ್ ಪಕ್ಷದೊಡನೆ ಕೈಜೋಡಿಸುವ ನಿರ್ಧಾರ ಕೈಗೊಂಡಿರುವುದು ಅಕ್ಷಮ್ಯ ಅಪರಾಧ. ಈ ನಾಡಿನ ಜನತೆ ಎಂದಿಗೂ ಇದನ್ನು ಕ್ಷಮಿಸುವುದಿಲ್ಲ ಎಂದರು.

ಲಕ್ಷ್ಮಣ ಸವದಿಯವರ ಬಗ್ಗೆಯೂ ತೀವವಾಗಿ ಟೀಕಿಸಿದ ಬಿ.ಎಸ್.ಯಡಿಯೂರಪ್ಪ, ಈ ಹಿಂದೆ ಅವರನ್ನು ಸಚಿವರನ್ನಾಗಿ ಮಾಡಿದ್ದಂತೆಯೇ ಮತ್ತೆ ಪಕ್ಷಕ್ಕೆ ಅಧಿಕಾರಕ್ಕೆ ಬಂದಮೇಲೆ ಅವರನ್ನು ಮಂತ್ರಿಯನ್ನಾಗಿ ಮಾಡಲು ಸಿದ್ದರೆದ್ದವು . ಆದರೆ ಲಕ್ಷ್ಮಣ ಸವದಿ ಪಕ್ಷ ತೊರೆಯುವ ಮೂಲಕ ವಿಶ್ವಾಸ ದ್ರೋಹ ಮಾಡಿದ್ದಾರೆಂದು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ಪ್ರಮುಖ ನಾಯಕರು ಹಾಜರಿದ್ದರು.

ಹೆಚ್ಚಿನ ಸುದ್ದಿ