Tuesday, July 8, 2025
Homeಟಾಪ್ ನ್ಯೂಸ್ದಿಲ್ಲಿ ಸಿಎಂ ಕೇಜ್ರಿವಾಲ್ ಗೆ ಸಿಬಿಐ ಸಮನ್ಸ್

ದಿಲ್ಲಿ ಸಿಎಂ ಕೇಜ್ರಿವಾಲ್ ಗೆ ಸಿಬಿಐ ಸಮನ್ಸ್

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಸಮನ್ಸ್ ನೀಡಿದ್ದು, ಏಪ್ರಿಲ್ 16ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಆಮ್ ಆದ್ಮಿ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲಿನಲ್ಲಿರುವ ನಡುವೆಯೇ ಈ ಸಮನ್ಸ್ ಜಾರಿಗೊಳಿಸಲಾಗಿದೆ.

“ದಬ್ಬಾಳಿಕೆಗೆ ಖಂಡಿತಾ ಅಂತ್ಯವಿದೆ. ಅರವಿಂದ್ ಕೇಜ್ರಿವಾಲ್ ಗೆ ಸಿಬಿಐ ಸಮನ್ಸ್ ನೀಡಿರುವ ವಿಚಾರದಲ್ಲಿ ಸಂಜೆ 6 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುತ್ತೇವೆ” ಎಂದು ಪಕ್ಷದ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಟ್ವಿಟರ್ ನಲ್ಲಿ ಹೇಳಿದ್ದಾರೆ.

ಹೆಚ್ಚಿನ ಸುದ್ದಿ