Tuesday, August 4, 2026
Homeಜಿಲ್ಲಾ ಸುದ್ದಿಗಳುCEIR ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್‌ಗಳ ಪತ್ತೆ; ವಾರಸುದಾರರಿಗೆ ಹಸ್ತಾಂತರಿಸಿದ ಗಂಗಾವತಿ ಗ್ರಾಮೀಣ ಪೊಲೀಸರು

CEIR ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್‌ಗಳ ಪತ್ತೆ; ವಾರಸುದಾರರಿಗೆ ಹಸ್ತಾಂತರಿಸಿದ ಗಂಗಾವತಿ ಗ್ರಾಮೀಣ ಪೊಲೀಸರು

CEIR ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್‌ಗಳ ಪತ್ತೆ; ವಾರಸುದಾರರಿಗೆ ಹಸ್ತಾಂತರಿಸಿದ ಗಂಗಾವತಿ ಗ್ರಾಮೀಣ ಪೊಲೀಸರು

ಗಂಗಾವತಿ: ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸರ್ಕಾರದ CEIR (Central Equipment Identity Register) ಪೋರ್ಟಲ್ ಮೂಲಕ ಯಶಸ್ವಿಯಾಗಿ ಪತ್ತೆಹಚ್ಚಿ, ಅವುಗಳನ್ನು ಸಂಬಂಧಿಸಿದ ವಾರಸುದಾರರಿಗೆ ಮರಳಿ ಹಸ್ತಾಂತರಿಸಲಾಯಿತು.

ಸಾರ್ವಜನಿಕರು ಕಳೆದುಹೋದ ಮೊಬೈಲ್‌ಗಳ ಕುರಿತು ಸಲ್ಲಿಸಿದ್ದ ದೂರುಗಳ ಆಧಾರದ ಮೇಲೆ ಪೊಲೀಸರು CEIR ಪೋರ್ಟಲ್ ಬಳಸಿ ತಾಂತ್ರಿಕವಾಗಿ ಮೊಬೈಲ್‌ಗಳನ್ನು ಪತ್ತೆಹಚ್ಚುವ ಕಾರ್ಯ ಕೈಗೊಂಡಿದ್ದರು. ಪತ್ತೆಯಾದ ಮೊಬೈಲ್‌ಗಳನ್ನು ಪರಿಶೀಲನೆಯ ಬಳಿಕ ನಿಜವಾದ ಮಾಲೀಕರಿಗೆ ಹಸ್ತಾಂತರಿಸಿ ಅವರ ಮುಖದಲ್ಲಿ ಸಂತಸ ಮೂಡಿಸಿದರು.

ಈ ಸಂದರ್ಭದಲ್ಲಿ ಮೊಬೈಲ್ ಕಳೆದುಹೋದ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ ಹಾಗೂ CEIR ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದರು. ಇದರಿಂದ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆಹಚ್ಚಲು ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಮೊಬೈಲ್‌ಗಳನ್ನು ಮರಳಿ ಪಡೆದ ವಾರಸುದಾರರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು.

ಹೆಚ್ಚಿನ ಸುದ್ದಿ