Monday, March 2, 2026
Homeಚುನಾವಣೆ 2023ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಳ್ಳುವಂತಿಲ್ಲ

ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಳ್ಳುವಂತಿಲ್ಲ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಪ್ರಚಾರ ಮಾಡುವ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಹಾಗೂ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ.

ಈ ಬಗ್ಗೆ ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎ ದಯಾನಂದ ಪ್ರಕಟಣೆಯಲ್ಲಿ ಹೊರಡಿಸಿದ್ದು, ರಾಜಕೀಯ ಪಕ್ಷಗಳ ಮೆರವಣೆಗೆ, ಸಾರ್ವಜನಿಕ ಭಾಷಣ, ಮನೆ ಮನೆಗೆ ಭೇಟಿ ನೀಡುವುದು, ಪಕ್ಷದ ಚಿಹ್ನೆಯಿರುವ ಪುಸ್ತಕ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರ ಹಂಚುವುದು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ