Saturday, June 6, 2026
Homeಚುನಾವಣೆ 2023ಸಿಎಂ ಭೇಟಿಗೆ ರಾಜಕೀಯ ಅರ್ಥ ಬೇಡ: ನಟ ರಿ‌ಷಬ್ ಶೆಟ್ಟಿ

ಸಿಎಂ ಭೇಟಿಗೆ ರಾಜಕೀಯ ಅರ್ಥ ಬೇಡ: ನಟ ರಿ‌ಷಬ್ ಶೆಟ್ಟಿ

ಬೆಂಗಳೂರು: ಕಾಂತಾರ ಸಿನಿಮಾದಿಂದ ಇಡೀ ವಿಶ್ವಕ್ಕೆ ಚಿರಪರಿಚಿತರಾದ ರಿಷಬ್ ಶೆಟ್ಟಿ, ಗುರುವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕಾಕತಾಳಿಯ ಎಂಬಂತೆ ಸಿಎಂ ಬೊಮ್ಮಾಯಿ ಕೂಡ ಅದೇ ದೇವಾಲಯಕ್ಕೆ ಆಶೀರ್ವಾದ ಪಡೆಯಲು ತೆರಳಿದ್ದರು. ಈ ವೇಳೆ ದೇವಾಲಯದಲ್ಲಿ ಸಿಎಂ ಬೊಮ್ಮಾಯಿ ಹಾಗೂ ರಿಷಬ್ ಶೆಟ್ಟಿ ಭೇಟಿಯಾಗಿದ್ದರು. ಇದು ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡಿತ್ತು. ಈ ಬಗ್ಗೆ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ರಿಷಬ್ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಹೋದಾಗ ಕಾಕತಾಳಿಯವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದೆ. ಇದಕ್ಕೆ ಯಾವುದೇ ರಾಜಕೀಯ ಬಣ್ಣ ಕಟ್ಟಬೇಡಿ. ಸದ್ಯ ನಾನು ಕಾಂತಾರ ಸಿನಿಮಾದ ಬರವಣಿಗೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದೇನೆ. ಇದಕ್ಕೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಇರಲಿ ಎಂದು ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಹಾಗೂ ರಿಷಬ್ ಶೆಟ್ಟಿ ಭೇಟಿಯಾಗಿದ್ದು, ರಿಷಬ್ ಶೆಟ್ಟಿ ರಾಜಕೀಯಕ್ಕೆ ಬರುತ್ತಾರೆ, ಎಲೆಕ್ಷನ್ ಪ್ರಚಾರ ಮಾಡುತ್ತಾರೆ ಅನ್ನೋ ಊಹಾಪೋಹಗಳಿಗೆ ರಿಷಬ್ ಶೆಟ್ಟಿ ತೆರೆ ಎಳೆದಿದ್ದಾರೆ. ನಟರ

ಗುರುವಾರ ಸಿಎಂ ಬೊಮ್ಮಾಯಿ ಈ ಬಗ್ಗೆ ಮಾತನಾಡಿ, ರಿಷಬ್ ಶೆಟ್ಟಿ ಕೊಲ್ಲೂರಿಗೆ ಬಂದಿರುವ ಬಗ್ಗೆ ನನಗೆ ಗೊತ್ತೇ ಇರಲಿಲ್ಲ. ಅವರು ಮೊದಲಿನಿಂದಲೂ ನನಗೆ ಒಳ್ಳೆಯ ಸ್ನೇಹಿತರು. ಎಲೆಕ್ಷನ್ ಪ್ರಚಾರಕ್ಕೆ ಬರ್ತಾರಾ ಎಂದು ಕೇಳಿದ್ದಕ್ಕೆ ಈ ವಿಚಾರವಾಗಿ ಅವರ ಜೊತೆ ಮಾತನಾಡಿಲ್ಲ. ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಯಾವುದೇ ಪ್ಲಾನ್ ಇಲ್ಲ ಎಂದು ಹೇಳಿದ್ದರು.

ಹೆಚ್ಚಿನ ಸುದ್ದಿ