ಹಾವೇರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ರು. ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬೊಮ್ಮಾಯಿ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ರು.
ಕೇಸರಿ ಶಾಲು ಧರಿಸಿ ನಾಮಪತ್ರ ಸಲ್ಲಿಕೆ ಆಗಮಿಸಿದ ಬೊಮ್ಮಾಯಿಯವರಿಗೆ ಸಂಸದ ಶಿವಕುಮಾರ್ ಉದಾಸಿ, ಸಿಸಿ ಪಾಟೀಲ್, ಸಿಎಂ ಪುತ್ರ ಭರತ್ ಬೊಮ್ಮಾಯಿ ಹಾಗೂ ಕ್ಷೇತ್ರದ ಮುಖಂಡರು ಸಾಥ್ ನೀಡಿದ್ರು.