Monday, October 13, 2025
Homeಚುನಾವಣೆ 2023ಇಂದು ಬಸವರಾಜ್ ಬೊಮ್ಮಾಯಿ ನಾಮಪತ್ರ

ಇಂದು ಬಸವರಾಜ್ ಬೊಮ್ಮಾಯಿ ನಾಮಪತ್ರ

2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದ ಸ್ಪರ್ಧಿಯಾಗಿರುವ ಬೊಮ್ಮಾಯಿ ಇಂದು (ಏಪ್ರಿಲ್ 15) ಬೆಳಿಗ್ಗೆ 11 ಘಂಟೆಗೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ತಮ್ಮ ಸ್ವಕ್ಷೇತ್ರದಲ್ಲಿ ಕರ್ಯಕರ್ತರ ಜೊತೆ ಸರಣಿ ಸಭೆಗಳು ಹಾಗೂ ಪ್ರಚಾರ ಕಾರ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತೊಡಗಲಿದ್ದಾರೆ.

ಈಗಾಗಲೇ ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದಿಂದ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಿಎಂ ಹುಬ್ಬಳ್ಳಿ ತಲುಪಿ ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಶಿಗ್ಗಾಂವಿಗೆ ತೆರಳಲಿದ್ದಾರೆ.

ಹೆಚ್ಚಿನ ಸುದ್ದಿ