ಸಚಿವ ಎಸ್‌ಟಿ ಸೋಮಶೇಖರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದೆ. ಮತದಾರರಿಗೆ ಬಿರಿಯಾನಿ ಹಂಚಿಕೆ ಮಾಡಿದ್ದಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವ ಸೋಮಶೇಖರ್ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕಾರ್ಯ ವೇಳೆ ಬಿರಿಯಾನಿ ಊಟದ ವ್ಯವಸ್ಥೆ ಮಾಡಿರುವುದಾಗಿ ಸೋಮಶೇಖರ್ ತಮ್ಮ ಭಾಷಣದಲ್ಲಿ ಹೇಳಿದ್ದರು.
ಈ ಬಗ್ಗೆ ಜೆಡಿಎಸ್‌ನ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎಪಿ ರಂಗನಾಥ ದಾಖಲೆ ಸಮೇತ ಯಶವಂತಪುರ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು.
ಪರಿಶೀಲನೆ ನಡೆಸಿದ ಚುನಾವಣಾ ಅಧಿಕಾರಿಗಳು, ಕಗ್ಗಲೀಪುರ ಪೊಲೀಸ್ ಠಾಣೆಗೆ ನೀತಿಸಂಹಿತೆ ಉಲ್ಲಂಘನೆ ದೂರು ನೀಡಿದ್ದು, ಅದರ ಆಧಾರದಲ್ಲಿ ಕಗ್ಗಲೀಪುರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
