ಬೆಂಗಳೂರು: ಕಾಂಗ್ರೆಸ್ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಅದರಲ್ಲಿ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿ ಹೊಸ ಅಭ್ಯರ್ಥಿ ಘೋಷಣೆ ಮಾಡಿದೆ. ಈ ಹಿಂದೆ ಘೋಷಿಸಲಾಗಿದ್ದ ಮೊಹಮ್ಮದ್ ಯೂಸುಫ್ ಸವಣೂರ್ ಬದಲಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಹೆಸರು ಘೋಷಿಸಲಾಗಿದೆ.
ಯೂಸುಫ್ ಸವಣೂರ್ ಮೂಲತಃ ಹುಬ್ಬಳ್ಳಿ ಜಿಲ್ಲೆಯವರಾಗಿದ್ದು, ಇವರಿಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಇದೀಗ ಹಾವೇರಿಯವರೇ ಆದ ಯಾಸಿರ್ ಅಹ್ಮದ್‌ಖಾನ್ ಪಠಾಣ್‌ಗೆ ಟಿಕೆಟ್ ನೀಡಿ ಸ್ಥಳೀಯ ಮುಖಂಡರನ್ನು ಸಮಾಧಾನಪಡಿಸಲಾಗಿದೆ. ಆ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಗೆಲುವಿನ ಲೆಕ್ಕಾಚಾರ ಹಾಕಿದೆ.