Monday, July 7, 2025
Homeಚುನಾವಣೆ 2023ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್

ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್

ಹುಬ್ಬಳ್ಳಿ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಅವರಿಗೆ ಕೊನೆಗೂ ಹುಬ್ಬಳ್ಳಿ – ಧಾರವಾಡ ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಟಿಕೆಟ್ ದೊರೆತಿದೆ. ಅಲ್ಲಿಗೆ ಈ ಬಾರಿ ಕ್ಷೇತ್ರದಲ್ಲಿ ತೀವ್ರ ಹಣಾಹಣಿ ಖಚಿತಗೊಂಡಿದೆ.

ಶಾಸಕ ಸ್ಥಾನಕ್ಕೆ ಉಮೇದುವಾರಿಕೆ ಬಯಸಿದ್ದ ಜಗದೀಶ್ ಶೆಟ್ಟರ್ ಬಿಜೆಪಿ ನಾಯಕರ ಯಾವುದೇ ಸಂಧಾನಕ್ಕೂ ಬಗ್ಗಿರಲಿಲ್ಲ. ಬಿಜೆಪಿ ಟಿಕೆಟ್ ಕೊಡಲಿ ಬಿಡಲಿ ನಾನು ಸ್ಪರ್ಧಿಸುವುದಂತೂ ಖಚಿತ ಎಂದು ಸ್ಪಷ್ಟವಾಗಿ ನುಡಿದಿದ್ದರು.

ತಮ್ಮ ನಾಲ್ಕು ದಶಕಗಳ ರಾಜಕೀಯ ನಂಟನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರಗೊಂಡಿದ್ದ ಶೆಟ್ಟರ್ ಅವರ ನಡೆ ರಾಜ್ಯ ರಾಜಕಾರಣದಲ್ಲೇ ದೊಡ್ಡ ಬಿರುಗಾಳಿಯನ್ನು ಎಬ್ಬಿಸಿತ್ತು.

ಈಗ ಮಹೇಶ್ ಟೆಂಗಿನಕಾಯಿ ಜಗದೀಶ್ ಶೆಟ್ಟರ್ ನಡುವೆ ಭಾರೀ ತುರುಸಿನ ಸ್ಪರ್ಧೆ ಏರ್ಪಡಲಿದ್ದು, ಹು-ಧಾ ಸೆಂಟ್ರಲ್ ಕ್ಷೇತ್ರ ಎರಡೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಾಡಾಗಿದೆ.

ಹೆಚ್ಚಿನ ಸುದ್ದಿ