ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಕಾಂಗ್ರೆಸ್ ಅವರಿಗೆ ಬಿ ಫಾರಂ ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್ ಅವರಿಗೆ ಬಿ ಫಾರಂ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೆಟ್ಟರ್ ಕಣಕ್ಕಿಳಿಯಲಿದ್ದಾರೆ.
ಕೆಪಿಸಿಸಿ ಕಛೇರಿಯಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಕೆಪಿಸಿಸಿ ಕಚೇರಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
