ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಇಬ್ಬರಲ್ಲ, ನಾಲ್ವರು ಆಕಾಂಕ್ಷಿಗಳಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆ ಜೊತೆ ಕೆಲಸ ಮಾಡುವುದು ಒಳ್ಳೆಯ ಅನುಭವ, ಅವರು ಮುಖ್ಯಮಂತ್ರಿ ಆಗುವುದಾದರೆ ಅವರೊಂದಿಗೆ ಕೆಲಸ ಮಾಡುವುದಾಗಿ ಡಿಕೆ ಶಿವಕುಮಾರ್ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕರಂದ್ಲಾಜೆ, ನನ್ನ ಪ್ರಕಾರ ಕಾಂಗ್ರೆಸ್ ನಲ್ಲಿ ನಾಲ್ಕು ಜನರು ಸಿಎಂ ಅಭ್ಯರ್ಥಿಗಳು ರೇಸ್ ನಲ್ಲಿದ್ದಾರೆ. ಮೊದಲು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೇ ಇದ್ದರು. ಆದರೆ ಈಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಂಬಿ ಪಾಟೀಲ್ ಕೂಡ ಸಿಎಂ ರೇಸ್ ನಲ್ಲಿದ್ದಾರೆ. ಇದರ ಬಗ್ಗೆಯೇ ಜಗಳವಾಗುತ್ತಿದೆ ಎಂದು ಹೇಳಿದ್ದಾರೆ.
ಅದಕ್ಕೂ ಮುನ್ನ, ಎಂಬಿ ಪಾಟಿಲ್ ಕೂಡಾ ಸಿಎಂ ಸ್ಥಾನಕ್ಕೆ ಹಲವು ಆಕಾಂಕ್ಷಿಗಳು ಇರುವುದನ್ನು ಒಪ್ಪಿಕೊಂಡಿದ್ದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತ್ರವಲ್ಲದೆ ಕೃಷ್ಣಭೈರೇಗೌಡ ಹಾಗೂ ನಾನು ಸೇರಿದಂತೆ ಇತರೆ ನಾಯಕರು ಸಿಎಂ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಿದ್ದರು,