ಕಾಂಗ್ರೆಸ್ ಮುಖಂಡ ವಿವೇಕ್ ರಾಜ್ ಎಂಬುವವರ ಮಂಗಳೂರು ನಗರದ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಮಣ್ಣಗುಡ್ಡದಲ್ಲಿರುವ ವಿವೇಕ್ ರಾಜ್ ಪೂಜಾರಿ ವಾಸ ಇರುವ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎರಡು ಕಾರುಗಳಲ್ಲಿ ಬಂದಿರುವ 8 ಮಂದಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪನಾಮಾ ಸಂಸ್ಥೆಯ ಸಿಇಒ ಕೂಡ ಆಗಿರುವ ವಿವೇಕ್ ರಾಜ್ ಪೂಜಾರಿ ಹಲವಾರು ಉದ್ಯಮಗಳನ್ನು ನಡೆಸಿಕೊಂಡು ಬರುತ್ತಿದ್ದು ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು.