Monday, October 13, 2025
Homeಚುನಾವಣೆ 2023ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಅಖಂಡ ಶ್ರೀನಿವಾಸ್ ಮೂರ್ತಿ

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಅಖಂಡ ಶ್ರೀನಿವಾಸ್ ಮೂರ್ತಿ

ಶಿರಸಿ: ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನ ಮೂರು ಪಟ್ಟಿಯಲ್ಲಿಯೂ ನನಗೆ ಟಿಕೆಟ್ ನೀಡಿಲ್ಲ. ಇದರಿಂದ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಖಂಡ ಹೇಳಿದ್ದಾರೆ.

ಕೆಲವು ಹಿರಿಯ ನಾಯಕರು ನನಗೆ ಟಿಕೆಟ್ ನೀಡಬಾರದು ಎಂದು ತೀರ್ಮಾನ ಮಾಡಿದ್ದಾರೆ. ಯಾರದೋ ತಪ್ಪಿಗೆ ನನ್ನ ಮನೆ ಸುಟ್ಟುಕೊಂಡಿದ್ದೇನೆ. ನನಗೆ ಈ ರೀತಿ ನೋವು ಕೊಡಲಾಗುತ್ತದೆ. ನನ್ನ ಕ್ಷೇತ್ರದಲ್ಲಿ ಎಲ್ಲರೂ ಅಣ್ಣತಮ್ಮಂದರಂತೆ ಇದ್ದೇವೆ. ಆದರೆ, ಕ್ಷೇತ್ರದ ಹೊರಗಿನವರ ಹೇಳಿಕೆ ಪರಿಗಣಿಸಿ ನನಗೆ ಟಿಕೆಟ್ ನೀಡುತ್ತಿಲ್ಲ ಎಂದು ಅಖಂಡ ಹೇಳಿದ್ದಾರೆ.

ಡಿಜೆಹಳ್ಳಿ, ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿ ಅಖಂಡ ಶ್ರಿನಿವಾಸ್ ವಿರುದ್ಧ ಒಂದು ವರ್ಗದ ಮುಸ್ಲಿಂ ಮುಖಂಡರು ಕಾಂಗ್ರೆಸ್ ಗೆ ಒತ್ತಡ ಹೇರಿದ್ದು, ಅವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿತ್ತು.

ಹೆಚ್ಚಿನ ಸುದ್ದಿ