Saturday, June 6, 2026
Homeಟಾಪ್ ನ್ಯೂಸ್ಕಾರ್ತಿ ಚಿದಂಬರಂಗೆ ಸೇರಿದ ರೂ.11.04 ಕೋಟಿ ಆಸ್ತಿ ಇಡಿ ವಶ

ಕಾರ್ತಿ ಚಿದಂಬರಂಗೆ ಸೇರಿದ ರೂ.11.04 ಕೋಟಿ ಆಸ್ತಿ ಇಡಿ ವಶ

ನವದೆಹಲಿ: ಐಎನ್ ಎಕ್ಸ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ಸೇರಿದ ರೂ. 11.04 ಕೋಟಿ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಶಕ್ಕೆ ಪಡೆದಿರುವ ನಾಲ್ಕು ಆಸ್ತಿಗಳ ಪೈಕಿ, ಒಂದು ಸ್ಥಿರಾಸ್ತಿ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿದೆ. ಕಾರ್ತಿ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆ ಅನ್ವಯ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದು, ಐಎನ್‌ಎಕ್ಸ್ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿಯಿಂದ ಬಂಧಿಸಲ್ಪಟ್ಟಿದ್ದಾರೆ.

ಚಿದಂಬರಂ ಯುಪಿಎ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿಗೆ ಅನುಮೋದನೆಗೆ ಸಂಬಂಧಿಸಿದಂತೆ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಿಂದ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಹೆಚ್ಚಿನ ಸುದ್ದಿ