ಮಂಗಳೂರು/ತುಮಕೂರು : ಕ್ಷಿಪ್ರ ಬೆಳವಣಿಗೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾದ ಇಬ್ಬರು ಮುಖಂಡರು ಗುರುವಾರ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಮೊಯ್ದಿನ್ ಬಾವಾ ಜೆಡಿಎಸ್ ಈ ಬಾರಿ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುತ್ತಿದ್ದರೆ, ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಣ್ಣನ ಮಗ ಗುರುಚರಣ್.ಎಸ್. ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಮೊಯ್ದಿನ್ ಬಾವಾ ಅವರಿಗೆ ಟಿಕೆಟ್ ಕೈತಪ್ಪಿದ್ದು, ಡಿ.ಕೆ.ಶಿವಕುಮಾರ್ ಆಪ್ತ ಇನಾಯತ್ ಅಲಿಗೆ ಅವಕಾಶ ನೀಡಲಾಗಿತ್ತು. ಇದರಿಂದ ಬಾವಾ ಜೆಡಿಎಸ್ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್ ಗೆ ಟಕ್ಕರ್ ನೀಡಲಿದ್ದಾರೆ.
ಇದೇ ರೀತಿ ಮದ್ದೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಗುರುಚರಣ್ ಮದ್ದೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ ಕದಲೂರು ಉದಯ್ ಅವರಿಗೆ ಕಾಂಗ್ರೆಸ್ ಮಣೆ ಹಾಕಿ, ಗುರುಚರಣ್ ಅವರಿಗೆ ತಾರಮ್ಮಯ್ಯ ಆಡಿಸಿತ್ತು. ಇವರು ಈ ಬಾರಿ ಮದ್ದೂರು ಕ್ಷೇತ್ರದ ಜೆಡಿಎಸ್ ಅಭ್ಯಥಿ ಡಿ.ಸಿ.ತಮ್ಮಣ್ಣ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.