Monday, October 13, 2025
Homeಚುನಾವಣೆ 2023ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಪ್ರಚಾರ ನಡೆಸುವ ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆ ಮಾಡಿದೆ. 40  ಮಂದಿ ಹೆಸರಿರುವ ಈ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ.ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ.

ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ರಣ್ ದೀಪ್ ಸಿಂಗ್ ಸುರ್ಜೇವಾಲಾ, ಜಿ.ಪರಮೇಶ್ವರ್ ಮುಂತಾದವರಿಗೆ ಈ ಪಟ್ಟಿಯಲ್ಲಿ ಆದ್ಯತೆಯ ಸ್ಥಾನಗಳನ್ನು ನೀಡಲಾಗಿದೆ. ಉಳಿದಂತೆ ಚಿತ್ರನಟರಾದ ರಮ್ಯಾ, ಉಮಾಶ್ರೀ ಹಾಗೂ ಸಾಧುಕೋಕಿಲ ಸಹ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಹೆಚ್ಚಿನ ಸುದ್ದಿ