Monday, March 2, 2026
Homeಚುನಾವಣೆ 2023ನಾವು 141 ಸೀಟ್ ಗೆಲ್ಲೋದು ಪಕ್ಕಾ : ಡಿ.ಕೆ.ಶಿವಕುಮಾರ್

ನಾವು 141 ಸೀಟ್ ಗೆಲ್ಲೋದು ಪಕ್ಕಾ : ಡಿ.ಕೆ.ಶಿವಕುಮಾರ್

ಬೆಂಳೂರು: 2023ರ ಚುನಾವಣೆಯಲ್ಲಿ ಕಾಂಗ್ರೆಸ್ 141 ಸೀಟ್‌ ಗೆಲ್ಲೋದು ನಿಶ್ಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ರು. ‘ನಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಬಿಜೆಪಿ 65-70 ಕ್ಷೇತ್ರಗಳನ್ನು ಗೆಲ್ಲಲಿದೆ’ ಎಂದು ತಿಳಿಸಿದರು.

ಕನಕಪುರದಲ್ಲಿ ಆರ್‌.ಅಶೋಕ್ ಡಿ.ಕೆ ಶಿವಕುಮಾರ್ ವಿರುದ್ಧ ಕಣಕ್ಕಿಳಿರೋದರ ಬಗ್ಗೆ ಪ್ರತಿಕ್ರಿಯಿಸಿ ರಾಜಕಾರಣ ಫುಟ್ಬಾಲ್ ಆಟವಲ್ಲ, ಅದೊಂದು ಚದುರಂಗದಾಟ. ಬಿಜೆಪಿಯವರು ಚದುರಂಗದ ದಾಳಗಳನ್ನು ಉರುಳಿಸುತ್ತಿದ್ದಾರೆ. ಉರುಳಿಸಲಿ ಬಿಡಿ. ಅವರಿಗೆ ಶುಭವಾಗಲಿ. ರಾಜಕಾರಣದಲ್ಲಿ ಪ್ರತಿಸ್ಪರ್ಧೆ ಇರಬೇಕು. ಇಂತಹ ಹೋರಾಟ ನನಗೆ ಹೊಸತಲ್ಲ. ನಾನು 1985ರಲ್ಲಿ ದೇವೇಗೌಡರ ವಿರುದ್ಧ ಹೋರಾಡಿದ್ದೆ. ಕುಮಾರಸ್ವಾಮಿ ಅವರ ವಿರುದ್ಧವೂ ಹೋರಾಡಿದ್ದೆ. ಈಗಲೂ ಹೋರಾಡುತ್ತೇನೆ. ನನ್ನ ಜೀವನ ಹೋರಾಟದಿಂದಲೇ ಕೂಡಿದೆ. ಯಾರೇ ಬರಲಿ.. ಈ ಬಾರಿ ಕಾಂಗ್ರೆಸ್ ಸರ್ಕಾರ ರಚಿಸೋದು ಶತಸಿದ್ಧ ಎಂದ್ರು

ಹೆಚ್ಚಿನ ಸುದ್ದಿ