ಮಂಗಳೂರು: ಟಿಕೆಟ್ ಘೋಷಣೆ ಬಳಿಕ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದೂ ಸಹ ಟೆಂಪಲ್ ರನ್ ಮುಂದುವರೆಸಿದ್ದಾರೆ.
ನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಸೋಮೇಶ್ವರ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಬೊಮ್ಮಾಯಿ ಅವರು ಪತ್ನಿ ಸಮೇತರಾಗಿ ವೀರೇಂದ್ರ ಹೆಗ್ಗಡೆಯವರ ನಿವಾಸಕ್ಕೆ ಭೇಟಿ ನೀಡಿ, ಬಳಿಕ ಕುಕ್ಕೆ ಸುಬ್ರಹಣ್ಯ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
