ಧಾರವಾಡ: ಚುನಾವಣೆ ಹೊಸ್ತಿಲಲ್ಲಿ ಜನಪ್ರತಿನಿಧಿ ನ್ಯಾಯಾಲಯ ಕಾಂಗ್ರೆಸ್‌ಗೆ ಬಿಗ್ ಶಾಕ್ ನೀಡಿದೆ. ಧಾರವಾಡ ಕ್ಷೇತ್ರದ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ಪ್ರವೇಶವನ್ನು ಕೋರ್ಟ್ ನಿರಾಕರಿಸಿದೆ.
ಬಿಜೆಪಿ ಮುಖಂಡ ಹಾಗೂ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲರ್ಣಿಗೆ ನ್ಯಾಯಾಲಯ ತಡೆ ನೀಡಿದ್ದು, ಚುನಾವಣಾ ಪ್ರಚಾರಕ್ಕೆ ಹೋಗಲು ಅನುಮತಿ ನಿರಾಕರಿಸಿದೆ.
ಧಾರವಾಡ ಕ್ಷೇತ್ರದ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ ಪ್ರಚಾರ ಕಾರ್ಯ ನಿಮಿತ್ತ ಕ್ಷೇತ್ರಕ್ಕೆ ಹೋಗಲು ಅನುಮತಿ ಕೋರಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ 120 ಸಾಕ್ಷಿಗಳ ಪೈಕಿ ಧಾರವಾಡದಲ್ಲಿ 90 ಸಾಕ್ಷಿಗಳಿದ್ದಾರೆ. ಒಂದು ವೇಳೆ ವಿನಯ್ ಕಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಸಾಕ್ಷಿಗಳಿಗೆ ತೊಂದರೆಯಾಗಬಹುದು. ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂದು ಸಿಬಿಐ ವಾದಿಸಿದ್ದು, ಸಿಬಿಐ ವಾದಕ್ಕೆ ಮನ್ನಣೆ ನೀಡಿದ ಕೋರ್ಟ್ ಕುಲಕರ್ಣಿ ಅರ್ಜಿಯನ್ನು ವಜಾ ಮಾಡಿದೆ.
