Monday, July 7, 2025
Homeಚುನಾವಣೆ 2023ಸಿ.ಟಿ ರವಿಗೆ ಹೊಟ್ಟೆ ನೋವು: ಆಸ್ಪತ್ರೆಗೆ ದಾಖಲು

ಸಿ.ಟಿ ರವಿಗೆ ಹೊಟ್ಟೆ ನೋವು: ಆಸ್ಪತ್ರೆಗೆ ದಾಖಲು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಿಡ್ನಿ ಸ್ಟೋನ್‌ನಿಂದಾಗಿ ನೋವು ಕಾಣಿಸಿಕೊಂಡಿದ್ದು, 12 ಎಂಎಂ ಸ್ಟೋನ್ ಇರುವುದರಿಂದ ಶಸ್ತ್ರಚಿಕಿತ್ಸೆ ನಡೆಸಿ ಸ್ಟೋನ್ ಬ್ಲಾಸ್ಟ್ ಮಾಡಲಾಗುವುದು ಎಂದು ಆಶ್ರಯ ಆಸ್ಪತ್ರೆ ಮುಖ್ಯಸ್ಥ ಡಾ. ಡಿ. ಎಲ್. ವಿಜಯಕುಮಾರ್ ಅವರು ತಿಳಿಸಿದ್ದಾರೆ.

ಸ್ಟಂಟ್ ಮೂಲಕ ಕಲ್ಲುಗಳ ರವಾನೆ ಮಾಡಲಾಗುವುದು. ಇಂದು ಒಂದು ದಿನ ವಿಶ್ರಾಂತಿಯಲ್ಲಿರಲು ವೈದ್ಯರು ಸೂಚನೆ ನೀಡಿದ್ದಾರೆ. ಕಾಂಗ್ರೆಸ್ಸಿನ ಮಾಜಿ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಅವರ ಆಶ್ರಯ ಆಸ್ಪತ್ರೆಯಲ್ಲಿ ಸಿ.ಟಿ ರವಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಚ್ಚಿನ ಸುದ್ದಿ