ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತು.
ಅಬಕಾರಿ ನೀತಿ ಪ್ರಕರಣದಲ್ಲಿ ಮದ್ಯದ ಲಾಬಿಗೆ ಲಾಭವಾಗುವಂತೆ ನೀತಿ ರೂಪಿಸಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದು, ಕೇಜ್ರಿವಾಲ್ ರನ್ನು ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಪ್ರಶ್ನಿಸಲಾಗಿತ್ತು.
ಇನ್ನು ಮುಂದಿನ ವಿಚಾರಣೆಗೆ ಸಿಬಿಐ ಇದುವರೆಗೆ ಸಮನ್ಸ್ ನೀಡಿಲ್ಲ ಎನ್ನಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು.
