Monday, October 13, 2025
Homeಚುನಾವಣೆ 2023ಮೋದಿ ಕರ್ನಾಟಕದಲ್ಲಿಯೇ ಬಂದು ಇರಲಿ ಎಂದು ಡಿಕೆಶಿ ಹೇಳಿದ್ಯಾಕೆ?

ಮೋದಿ ಕರ್ನಾಟಕದಲ್ಲಿಯೇ ಬಂದು ಇರಲಿ ಎಂದು ಡಿಕೆಶಿ ಹೇಳಿದ್ಯಾಕೆ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಇಲ್ಲೇ ಇರಲಿ. ಇಲ್ಲಿನ ಹವಾಮಾನ, ಸಂಸ್ಕೃತಿ, ಆತಿಥ್ಯ ಎಲ್ಲವೂ ಉತ್ತಮವಾಗಿದೆ ಎಂದು ಡಿಕೆಶಿ ಟೀಕಸಿದ್ದಾರೆ. ರಾಜ್ಯಕ್ಕೆ ಮೋದಿ ಸುನಾಮಿ ಬಂದು ಅಪ್ಪಳಿಸಲಿದೆ ಎಂಬ ಜೆ.ಪಿ.ನಡ್ಡಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಮೋದಿ ತಮ್ಮ ಪಕ್ಷದ ನಾಯಕರನ್ನೇ ರಕ್ಷಿಸಿಕೊಳ್ಳಲಿಲ್ಲ. ಕರ್ನಾಟಕದಲ್ಲಿ ಅವರ ಮ್ಯಾಜಿಕ್ ನಡೆಯುವುದಿಲ್ಲ ಎಂದು ಡಿಕೆಶಿ ಲೇವಡಿ ಮಾಡಿದರು.

ಬುಧವಾರ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ವೀಕ್ಷಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾವು ನಮ್ಮ ಪಕ್ಷವನ್ನು ಗೆಲ್ಲಿಸಿಕೊಳ್ಳಲು ರಣತಂತ್ರ ರೂಪಿಸುತ್ತಿದ್ದು, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಕನಕಪುರವನ್ನು ಬಿಜೆಪಿ ಕ್ಷೇತ್ರವನ್ನಾಗಿ ಮಾಡುತ್ತೇವೆ ಎಂಬ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರಿಗೆ ನಾನು ಶುಭಾಷಯ ಕೋರುತ್ತೇನೆ. ಕನಕಪುರದಲ್ಲಿ ನಾನು ಅಭ್ಯರ್ಥಿ ಎನ್ನುವುದಕ್ಕಿಂತ, ಕ್ಷೇತ್ರದ ಪ್ರತಿ ಮನೆಯ ಮತದಾರ ಅಭ್ಯರ್ಥಿಯಾಗಿದ್ದಾರೆ. ಅವರೇ ಈ ಚುನಾವಣೆಯನ್ನು ನಡೆಸಲಿದ್ದಾರೆ’ ಎಂದರು.

ಹೆಚ್ಚಿನ ಸುದ್ದಿ