Monday, October 13, 2025
Homeಚುನಾವಣೆ 2023ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿದ ಡಿಕೆಶಿ

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿದ ಡಿಕೆಶಿ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಏಪ್ರಿಲ್ 20 ಕೊನೆಯ ದಿನವಾಗಿದೆ. ಈ ಹಿನ್ನಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿ ಫಾರಂ ವಿತರಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನೊಣವಿನಕೆರೆ ಅಜ್ಜಯ್ಯಗೆ ಪಾರ್ಥನೆ ಸಲ್ಲಿಸಿ ನಂತರ ಬಿ ಫಾರಂ ವಿತರಸಿ ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.

ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬೈರತಿ ಸುರೇಶ್ ರಾಜ್ಯದ ಮೊದಲ ಬಿ ಫಾರಂ ಪಡೆದಿದ್ದು, ನಂತರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕುಸುಮಾ ಹೆಚ್ ಹಾಗೂ ಮಹಾಲಕ್ಷೀ ಲೇಜೌಟ್‌ನ ಕ್ಷೇತ್ರದ ಅಭ್ಯರ್ಥಿ ಕೇಶವ ಮೂರ್ತಿ ಸೇರಿದಂತೆ ಹಲವರಿಗೆ ಬಿ ಫಾರಂ ನೀಡಿದ ಬಳಿಕ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳುವಂತೆ ಡಿಕೆ ಶಿವಕುಮಾರ್ ತಿಳಿಸಿದರು

ಹೆಚ್ಚಿನ ಸುದ್ದಿ