ಲಕ್ನೋ: ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಳಗ್ಗಿನ ಜಾವ ನಾಯಿಗಳ ಗುಂಪೊಂದು ದಾಳಿ ನಡೆಸಿದ ಪರಿಣಾಮ ಹಿರಿಯ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿರುವ ಉದ್ಯಾನವನದಲ್ಲಿ 65 ವರ್ಷದ ಡಾ ಸಫ್ದರ್ ಅಲಿ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಇದರಲ್ಲಿ ನಾಯಿಗಳ ಗುಂಪು ಸಫ್ದರ್ ಅಲಿ ಮೇಲೆ ದಾಳಿ ಮಾಡಿ, ಗಂಭೀರ ಗಾಯಗೊಳಿಸಿದ್ದು ಕಂಡುಬಂದಿದೆ.
ಕೂಡಲೇ ಅಲಿಯವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗಂಭೀರವಾಗಿ ಗಾಯಗೊಂಡಿದ್ದ ಅವರು ಕೊನೆಯಿಸಿರೆಳೆದಿದ್ದಾರೆ.