Monday, July 7, 2025
Homeಜಿಲ್ಲಾ ಸುದ್ದಿಗಳುದುಬೈ ಅಗ್ನಿ ದುರಂತದಲ್ಲಿ ನಾಲ್ವರು ಭಾರತೀಯರು ಸಾವು

ದುಬೈ ಅಗ್ನಿ ದುರಂತದಲ್ಲಿ ನಾಲ್ವರು ಭಾರತೀಯರು ಸಾವು

ದುಬೈನ ವಸತಿ ಸಂಕೀರ್ಣ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 4 ಮಂದಿ ಭಾರತೀಯರು ಸೇರಿದಂತೆ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ದುಬೈನ ಹಳೆಯ ಪ್ರದೇಶವಾದ ಅಲ್ ರಾಸ್‌ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಯಲ್ಲಿ ಕೇರಳ ಮೂಲದ ದಂಪತಿಗಳು ಸೇರಿದಂತೆ ಕನಿಷ್ಠ ನಾಲ್ವರು ಭಾರತೀಯರು ಸೇರಿ 16 ಜನರು ಸಾವನ್ನಪ್ಪಿದ್ದಾರೆ. ಭಾರತೀಯ ಮೂಲದ ಮೃತರನ್ನು ರಿಜೇಶ್ (38) ಆತನ‌ ಪತ್ನಿ ರಿಜಿ (32) ತಮಿಳುನಾಡಿನ ಅಬ್ದುಲ್ ಖಾದರ್ ಹಾಗೂ ಸಲೈಕುಂಡ್ ಎಂದು ಗುರುತಿಸಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಇತರ ಪ್ರದೇಶಗಳಿಗೆ ವ್ಯಾಪಿಸಿದೆ. ದುಬೈ ಸಿವಿಲ್ ಡಿಫೆನ್ಸ್ ಪ್ರಧಾನ ಕಚೇರಿಯ ತಂಡವು ಬೆಂಕಿಯ ಸ್ಥಳಕ್ಕೆ ಆಗಮಿಸಿ ಕಟ್ಟಡದ ನಿವಾಸಿಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿತು. ಪೋರ್ಟ್ ಸೈದ್ ಅಗ್ನಿಶಾಮಕ ಠಾಣೆ ಮತ್ತು ಹಮ್ರಿಯಾ ಅಗ್ನಿಶಾಮಕ ಠಾಣೆಯಿಂದಲೂ ತಂಡಗಳನ್ನು ಕರೆದು ಕಾರ್ಯಾಚರಣೆ ನಡೆಸಲಾಯಿತು. ಬಳಿಕ ಮಧ್ಯಾಹ್ನ 2:42ಕ್ಕೆ (ಸ್ಥಳೀಯ ಕಾಲಮಾನ) ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ವರದಿ ತಿಳಿಸಿದೆ. 

ಹೆಚ್ಚಿನ ಸುದ್ದಿ