ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಸ್ವಯಂ ನಿವೃತ್ತಿ ಘೋಷಿಸಿ ಶಿವಮೊಗ್ಗ ನಗರ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಈಶ್ವರಪ್ಪ ಪುತ್ರ ಕಾಂತೇಶ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾದರು.
ಶಿವಮೊಗ್ಗ ನಗರ ಕ್ಷೇತ್ರಕ್ಕೆ ತನಗೆ ಅವಕಾಶ ನೀಡುವಂತೆ ಯಡಿಯೂರಪ್ಪರನ್ನು ಮನವಿ ಮಾಡಿಕೊಂಡ ಕಾಂತೇಶ್, ಬಿಜೆಪಿ, ಆರೆಸೆಸ್ ನನ್ನ ತಂದೆ ಮತ್ತು ಕುಟುಂಬವನ್ನು ಸಂಸ್ಕಾರದಿಂದ ಬೆಳೆಸಿದೆ, ಮುಂದಿನ ದಿನಗಳಲ್ಲಿ ನಮಗೆ ಒಳ್ಳೆಯದಾಗಲಿದೆ ಎಂದ್ರು.
ಪಕ್ಷ ನಮ್ಮ ಕೈ ಬಿಡಲ್ಲ. ನನಗೆ ಒಂದು ಅವಕಾಶ ಸಿಗುವ ನಂಬಿಕೆಯಲ್ಲಿ ನಾನು ಇದೀನಿ. ಜೊತೆಗೆ ಪಕ್ಷ ಏನೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧ. ಅಷ್ಟೇ ಅಲ್ಲ, ನಮ್ಮ ತಂದೆ ನಿರ್ಧಾರಕ್ಕೆ ನಾವು ಎಲ್ಲರೂ ಬದ್ಧರಾಗಿದೀವಿ. ಸಾವಿರಾರು ಕಾರ್ಯಕರ್ತರಿಗೆ ನಮ್ಮ ತಂದೆ ಮಾದರಿಯಾಗಿದ್ದಾರೆ. ಒಂದು ವೇಳೆ ಪಕ್ಷ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ, ಸಾಯೋವರೆಗೂ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರ್ತೀನಿ ಎಂದ್ರು
ಇನ್ನು ಆಯನೂರು ಮಂಜುನಾಥ್ ಎಲ್ಲೂ ಹೋಗಲ್ಲ, ಅವರು ಬಿಜೆಪಿಯಲ್ಲೇ ಉಳೀತಾರೆ. ಪಕ್ಷ ಯಾರನ್ನೇ ಅಭ್ಯರ್ಥಿ ಮಾಡಿದರೂ ಆಯನೂರು ಬೆಂಬಲಿಸ್ತಾರೆ ಎಂದ್ರು