ಬೆಂಗಳೂರು: ಬ್ರಾಹ್ಮಣ ಮತಗಳೇ ಹೆಚ್ಚಿರುವ ಬಿಜೆಪಿಯ ಭದ್ರಕೋಟೆ ಬೆಂಗಳೂರಿನ ಬಸವನಗುಡಿಯಲ್ಲಿ ಬಂಡಾಯದ ಬೆಂಕಿ ಹೊತ್ತಿದೆ. ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ
ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿರುವ ಬಿಜೆಪಿ ಬಸವನಗುಡಿ ಕ್ಷೇತ್ರದಲ್ಲೂ ಅಭ್ಯರ್ಥಿಯ ಬದಲಾವಣೆ ಮಾಡುತ್ತೆ ಎಂದು ಅಂದಾಜಿಸಲಾಗಿತ್ತು. ಆದರೆ ಮತ್ತೆ ರವಿ ಸುಬ್ರಹ್ಮಣ್ಯಗೇ ಟಿಕೆಟ್ ನೀಡಿರೋ ಹಿನ್ನೆಲೆಯಲ್ಲಿ ಕಟ್ಟೆ ಸತ್ಯ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಈ ಕುರಿತು ಬೆಂಬಲಿಗರೊಂದಿಗೆ ಸಭೆ ನಡೆಸಿರುವ ಸತ್ಯ ಏಪ್ರಿಲ್ 13ರ ಸಂಜೆ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಬಗ್ಗೆ ನಿರ್ಧಾರ ಘೋಷಣೆ ಮಾಡಲಿದ್ದಾರೆ.
