Monday, October 13, 2025
Homeಚುನಾವಣೆ 2023ಕೈತಪ್ಪಿದ ಟಿಕೆಟ್: ಬಿಜೆಪಿಗೆ ‘ಫೈಟರ್‌ ರವಿ’ ರಾಜೀನಾಮೆ

ಕೈತಪ್ಪಿದ ಟಿಕೆಟ್: ಬಿಜೆಪಿಗೆ ‘ಫೈಟರ್‌ ರವಿ’ ರಾಜೀನಾಮೆ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿದೆ. ಟಿಕೆಟ್‌ ಹಂಚಿಕೆಯಲ್ಲಿ ಅಸಮಾಧಾನ ಹೊಂದಿರುವ ಹಲವು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ರೌಡಿ ʼಫೈಟರ್‌ ರವಿʼ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಶನಿವಾರ ತೆರಳಿ ರಾಜೀನಾಮೆ ನೀಡಿದ್ದಾರೆ.

ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ, ಕಳೆದ ಎರಡು ವರ್ಷಗಳಿಂದ ನಾಗಮಂಗಲ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು.  ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿರುವ ಬಿಜೆಪಿ ರವಿ ಬದಲಿಗೆ ಸಪ್ತಗಿರಿ ನಾಯ್ಕ್‌ಗೆ ಟಿಕೆಟ್ ಘೋಷಣೆ ಮಾಡಿದೆ. 

ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾಗ ಫೈಟರ್‌ ರವಿಗೆ ಕೈ ಮುಗಿದ ಫೋಟೋ ವೈರಲ್‌ ಆಗಿತ್ತು.

ಇತ್ತೀಚೆಗೆ ನಾಗಮಂಗಲ ತಲುಪಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ್ದ ನಳಿನ್‌ ಕುಮಾರ್‌ ಕಟೀಲ್‌ ʼನಾಗಮಂಗಲ ತಾಲ್ಲೂಕಿನಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ್ ಫೈಟರ್ ರವಿ ಅವರ ಗೆಲುವು ನಿಶ್ಚಿತ’ ಎಂದಿದ್ದರು. ಈ ಹಿನ್ನೆಲೆಯಲ್ಲಿ ಫೈಟರ್‌ ರವಿಗೆ ಟಿಕೆಟ್‌ ಪಕ್ಕಾ ಎನ್ನಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿದೆ.

ಹೆಚ್ಚಿನ ಸುದ್ದಿ