ಚುನಾವಣೆ ಸಮೀಪಸುತ್ತಿದ್ದಂತೆ ಕೊಡಗಿನ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹಾಗೂ ವಕೀಲ ಪಿ. ಕೃಷ್ಣಮೂರ್ತಿಯವರ ಕಾರಿನ ಮೇಲೆ ಫೈರಿಂಗ್ ನಡೆದಿದೆ. ಕೃಷ್ಣಮೂರ್ತಿ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಬುಧವಾರ ತಡರಾತ್ರಿ ಮಡಿಕೇರಿ- ಚೆಟ್ಟಳ್ಳಿ ಮಾರ್ಗಮಧ್ಯದಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಸ್ವಲ್ಪದರಲ್ಲೇ ಪಾರಾಗಿರುವುದಾಗಿ ಅವರು ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ .
ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಹೆಚ್ಚೇನೂ ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಚುನಾವಣೆ ಸಮಯದಲ್ಲಿ ಸಮಾಜದ ಶಾಂತಿ ಕದಡಲು ಕುತಂತ್ರ ನಡೆದಿದೆ ಎಂದು ಶಾಸಕ ಕೆ.ಜಿ ಬೋಪಯ್ಯ ಕಿಡಿಕಾರಿದ್ದು, ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.
