Monday, March 2, 2026
Homeರಾಜ್ಯಹೃದಯಾಘಾತದಿಂದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ಹೃದಯಾಘಾತದಿಂದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ಚಿಕ್ಕಬಳ್ಳಾಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ (54) ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವೆಂಕಟಸ್ವಾಮಿಯವರಿಗೆ ಕಳೆದ ಒಂದು ತಿಂಗಳಲ್ಲೇ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಕಳೆದ ಮೂರು ದಿನಗಳ ಹಿಂದೆ ಸಹ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಡರಾತ್ರಿ 2:20ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಆಗಲಿದ್ದು, ಸ್ವಗ್ರಾಮ ಸಾದಹಳ್ಳಿಯ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿದ್ದ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಆದರೆ ಮಾ.21 ರಂದು ಪ್ರಚಾರ ಮುಗಿಸಿ ಮನೆಗೆ ಬಂದಾಗ ಮೊದಲ ಬಾರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು. ಮತ್ತೆ ಎರಡು ಬಾರಿ ಹೃದಯಾಘಾತವಾಗಿತ್ತು. ಈಗ ಮೂರನೇ ಬಾರಿಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

2008ರಲ್ಲಿ ದೇವನಹಳ್ಳಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ವೆಂಕಟಸ್ವಾಮಿ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದರು. 2013 ಹಾಗೂ 2018 ರಲ್ಲಿ ಪುನಃ ಸ್ಪರ್ಧೆ ಮಾಡಿ ಸೋತಿದ್ದರು.

ಹೆಚ್ಚಿನ ಸುದ್ದಿ