Saturday, June 6, 2026
Homeದೇಶಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್

ಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್

ಲಕ್ನೋ: ಪ್ರಕರಣವೊಂದಕ್ಕೆ ಸಂಬಂಧಿಸಿ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಕೋರ್ಟ್ ಗೆ ಶರಣಾಗಿರುವ ನಡುವೆಯೇ ಆತನ ಪುತ್ರ ಅಸದ್ ನನ್ನು ಉತ್ತರ ಪ್ರದೇಶ ಪೊಲೀಸರು ಎನ್ ಕೌಂಟರ್ ನಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ವಕೀಲ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅಸದ್ ಉತ್ತರ ಪ್ರದೇಶ ಪೊಲೀಸರಿಗೆ ಬೇಕಾಗಿದ್ದ. ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅಸದ್ ಮತ್ತು ಮತ್ತೋರ್ವ ಆರೋಪಿ ಗುಲಾಂ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ ₹ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಹತ್ಯೆಗೀಡಾದ ಆರೋಪಿಗಳಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣವೊಂದಕ್ಕೆ ಸಂಬಂಧಿಸಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರನನ್ನು ಪ್ರಯಾಗ್‌ರಾಜ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ದಿನದಲ್ಲಿ ಅಸದ್‌ ನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಶಾಸಕ ರಾಜು ಪಾಲ್ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಅತೀಕ್ ಅಹ್ಮದ್ ಆರೋಪಿಯಾಗಿದ್ದ. ಉಮೇಶ್ ಪಾಲ್ 2005ರಲ್ಲಿನಡೆದ ಈ ಘಟನೆಯ ಸಾಕ್ಷಿಯಾಗಿದ್ದರು. ಫೆಬ್ರವರಿ 24ರಂದು ಉಮೇಶ್ ಪಾಲ್ ಮತ್ತು ಅವರ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು.

ಉಮೇಶ್ ಪಾಲ್ ಪತ್ನಿ ಜಯಪಾಲ್ ನೀಡಿದ ದೂರಿನ ಆಧಾರದ ಮೇಲೆ ಫೆಬ್ರವರಿ 25 ರಂದು ಅಹ್ಮದ್, ಅಶ್ರಫ್, ಅವರ ಕುಟುಂಬ ಸದಸ್ಯರು ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಹೆಚ್ಚಿನ ಸುದ್ದಿ