Wednesday, June 17, 2026
Homeಚುನಾವಣೆ 2023ಬಿಜೆಪಿಗೆ ರಾಜೀನಾಮೆ ನೀಡಿದ ಗೂಳಿಹಟ್ಟಿ ಶೇಖರ್

ಬಿಜೆಪಿಗೆ ರಾಜೀನಾಮೆ ನೀಡಿದ ಗೂಳಿಹಟ್ಟಿ ಶೇಖರ್

ಶಿರಸಿ: ಈಗಾಗಲೇ ಅಭ್ಯರ್ಥಿಗಳ ಘೋಷಣೆ ಬಳಿಕ ಬಿಜೆಪಿ ಪಾಳಯದಲ್ಲಿ ರಾಜೀನಾಮೆ ಪರ್ವ ಶುರುವಾಗಿದ್ದು. ಬಿಜೆಪಿಯಲ್ಲಿ ಬಂಡಾಯದ ಕಾವು ಹೆಚ್ಚಾಗಿದೆ. ಟಿಕೆಟ್ ಕೈ ತಪ್ಪಿದ ಕಾರಣ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ನಾನು ನನ್ನ ಕಾರ್ಯಕರ್ತರಿಗೆ ಯಾವುದೇ ಕಾರಣಕ್ಕೂ ಮೋಸ ಮಾಡುವುದಿಲ್ಲ. ಮತ್ತೇ ಚುನಾಮಣೆಯಲ್ಲಿ ಸ್ಪರ್ಧೆ ಮಾಡುವ ಇಚ್ಛೆ ಇದೆ. 2008ರಲ್ಲಿ, 2013ರಲ್ಲಿ ಸ್ವತಂತ್ರವಾಗಿ ನಿಂತಿದ್ದೆ. ಆದ್ರೆ ಜೆಡಿಎಸ್ ಹಾಗೂ ಜನಾರ್ದನ ರೆಡ್ಡಿ ಅವರ ಎನ್‌ಪಿಪಿ ಪಕ್ಷದಿಂದಲೂ ಪಕ್ಷಕ್ಕೆ ಬರುವಂತೆ ಕರೆಯುತ್ತಿದ್ದಾರೆ. ಹಾಗಾಗಿ ಎರಡು‌ ದಿನದಲ್ಲಿ ನನ್ನ ಬೆಂಬಲಿಗರ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ