Tuesday, July 8, 2025
Homeಚುನಾವಣೆ 2023ಇಂದಿನಿಂದ ದೇವೇಗೌಡರ ಪ್ರಚಾರ ಆರಂಭ

ಇಂದಿನಿಂದ ದೇವೇಗೌಡರ ಪ್ರಚಾರ ಆರಂಭ

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರು ಇಂದಿನಿಂದ ಪ್ರಚಾರ ಆರಂಭಿಸಲಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದೇನೆ. ಸ್ವಂತ ಶಕ್ತಿ ಮೇಲೆ ಸರ್ಕಾರ ತರುವುದು ನಮ್ಮ ಗುರಿ. ಚುನಾವಣೆ ಅನಂತರ ಬಿಜೆಪಿ ಮತ್ತು ಕಾಂಗ್ರೆಸ್‌ ಜತೆಗೆ ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈ ಹಿನ್ನೆಲೆ ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದು, ಹಳೇ ಮೈಸೂರು ಭಾಗದ ಮಂಡ್ಯ, ಹಾಸನ, ಕೋಲಾರ, ಚಿಕ್ಕ ಮಗಳೂರು, ಚಿಕ್ಕ ಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಅಲ್ಲದೇ, ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ಎರಡನೇ ಹಂತದಲ್ಲಿ ರಾಯಚೂರು, ವಿಜಯಪುರ ಜಿಲ್ಲೆಗಳಿಗೂ ಪ್ರಚಾರಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಸುದ್ದಿ