ಧರ್ಮಸ್ಥಳ: ಮಾಜಿ ಸಿಎಂ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ಆಶೀರ್ವಾದ ಪಡೆದಿದ್ದಾರೆ. ಚುನಾವಣಗೆ ಕೆಲವೇ ದಿನಗಳು ಬಾಕಿ ಇದ್ದು, ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಪಂಚರತ್ನ ಯಾತ್ರೆ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಧರ್ಮಸ್ಥಳಕ್ಕೆ ಭೇಟಿಕೊಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು.

ಧರ್ಮಸ್ಥಳಕ್ಕೆ ಭೇಟಿ ವೇಳೆ ಅಭಿಮಾನಿಗಳನ್ನು ಭೇಟಿಯಾಗಿ ಸಂತಸ ಹಂಚಿಕೊಂಡರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬೋಜೇ ಗೌಡರು ಜತೆಯಲ್ಲಿ ಇದ್ದರು.