ಹಾಸನ: ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ ರೇವಣ್ಣ ಸಹಾಯಕ ಚುನಾವಣಾಧಿಕಾರಿ ನಯೀಮ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಮಾಧ್ಯಮದವರನ್ನು ಒಳಬಿಡಲಿಲ್ಲ ಎನ್ನುವ ಕಾರಣಕ್ಕೆ ರೇವಣ್ಣ ಅವರು ಅಧಿಕಾರಗಳ ಮೇಲೆ ಗರಂ ಆದ ಘಟನೆ ನಡೀತು. 5 ಜನರಿಗೆ ಮಾತ್ರ ಅವಕಾಶ ಇರೋದರಿಂದ ಮಾಧ್ಯಮಗಳ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ರಾಮನಗರ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ರು. ತಾಯಿ ಅನಿತಾ ಕುಮಾರಸ್ವಾಮಿಯವರೊಂದಿಗೆ ತೆರಳಿ ನಿಖಿಲ್ ನಾಮಪತ್ರ ಸಲ್ಲಿಸಿದ್ರು..

ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ ಮಂಜು ಕೂಡಾ ನಾಂಪತ್ರ ಸಲ್ಲಿಸಿದ್ರು. ಈ ವೇಳೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜೊತೆಗಿದ್ರು.