ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಕ್ಕೆ ಸ್ವತಃ ಅವರೇ ತೆರೆ ಎಳೆದಿದ್ದಾರೆ. ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲ್ಲ ಎಂದ ಹೆಚ್‌ಡಿಕೆ ಮಂಡ್ಯದಲ್ಲಿ ಸಾಮಾನ್ಯ ರೈತ ಮನೆಯ ಮಗಳನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದಿದ್ದಾರೆ.
ಮಮಡ್ಯ ವಿಧಾನಸಭಾ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡಲ್ಲ, ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂದಿದ್ಯಾರು? ಚನ್ನಪಟ್ಟಣ ಕ್ಷೇತ್ರದಿಂದ ನಾನು ಉಮೇದುವಾರಿಕೆ ಸಲ್ಲಿಸಿದ್ದೇನೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸಕ್ಕೆ ಮುಂದಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ನಾನು ಸುಮಲತಾರಷ್ಟು ದೊಡ್ಡ ವ್ಯಕ್ತಿಯಲ್ಲ. ಮಂಡ್ಯದಲ್ಲಿ ಸಾಮಾನ್ಯ ರೈತ ಮನೆಯ ಮಗಳನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಹೆಚ್‌ಡಿಕೆ ಮಂಡ್ಯದಲ್ಲಿ ಸ್ಪರ್ಧಿಸಿದರೆ ನಾನು ಸ್ಪರ್ಧಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದರು.