ಬೆಂಗಳೂರು: ಬಿಜೆಪಿ ಹೈಕಮಾಂಡ್ ನಿರ್ದೇಶನದಂತೆ ಲಿಂಗಾಯತ ಸಮುದಾಯದ 23 ಮುಖಂಡರ ಜೊತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಸಂಸದರು, ನಿಗಮ ಮಂಡಳಿ ಅಧ್ಯಕ್ಷರು ಸೇರಿದಂತೆ ಒಟ್ಟು 23 ಲಿಂಗಾಯತ ಮುಖಂಡರು ಭಾಗಿಯಾಗಿದ್ದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬೆಂಗಳೂರಿನ ಕುಮಾರಕೃಪಾ ರಸ್ತೆಯ ‘ಕಾವೇರಿ’ ನಿವಾಸದಲ್ಲಿ ಸಭೆ ನಡೆದಿದೆ.
ಸಭೆಯಲ್ಲಿ, ಲಿಂಗಾಯತ ಸಮುದಾಯದ ಮತಬ್ಯಾಂಕ್ ಅನ್ನು ಬಿಜೆಪಿಯಲ್ಲೇ ಭದ್ರಪಡಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ಹೇಳಿವೆ. ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ನಿರ್ಗಮನದಿಂದ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಈ ಸಭೆ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಕೂಡಾ ಸಭೆಯಲ್ಲಿ ಉಪಸ್ಥಿತರಿದ್ದರು